ಜು.26ರಂದು ಕಾರ್ಗಿಲ್ ವಿಜಯ ದಿನಾಚರಣೆ
Update: 2018-07-23 22:31 IST
ಉಡುಪಿ, ಜು.23: ಉಡುಪಿಯ ಸಂಚಲನ ಸಂಸ್ಥೆ ಇದೇ ಜು.26ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಕಾರ್ಗಿಲ್ ವಿಜಯ ದಿವಸ’ವನ್ನು ಆಚರಿಸಲಿದೆ.
ಅಂದು 527 ಹುತಾತ್ಮರ ಹೆಸರಿನಲ್ಲಿ 527 ಗಿಡಗಳನ್ನು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೆಡುವ ಮೂಲಕ ವಿಶಿಷ್ಟವಾಗಿ ಆಚರಿಸ ಲಾಗುವುದು ಎಂದು ಸಂಚಲನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ್ ನಿಂಬರ್ಗಿ, ಜಿಲ್ಲಾ ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ಗಿಲ್ಬರ್ಟ್ ಬ್ರಗಾಂಝ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.