×
Ad

ಹಿರಿಯಡ್ಕ ಸರಕಾರಿ ಕಾಲೇಜಿನಲ್ಲಿ ವನಮಹೋತ್ಸವ

Update: 2018-07-23 22:36 IST

ಉಡುಪಿ, ಜು.23: ಜಿಪಂ ಸಾಮಾಜಿಕ ಅರಣ್ಯ ವಿಭಾಗ ಉಡುಪಿ, ಸಾಮಾಜಿಕ ಅರಣ್ಯ ವಲಯ ಉಡುಪಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾಪು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಲಾಲಾಜಿ ಆರ್. ಮೆಂಡನ್ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ವನ್ನು ನೆರವೇರಿಸಿದರು.

 ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ನಳಿನಿ ಪ್ರದೀಪ್ ರಾವ್, ಜಿಪಂ ಸದಸ್ಯ ಚಂದ್ರಿಕಾ ಸಿ.ಜೆ., ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಮಾಲತಿ ಬಿ. ಆಚಾರ್ಯ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್.ಜಿ. ಭಟ್, ಶಿಕ್ಷಣ ತಜ್ಞ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಡಾ.ಎನ್.ಎಸ್.ಶೆಟ್ಟಿ, ಉಡುಪಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ರವೀಂದ್ರ ಪಿ. ಆಚಾರಿ, ಕಾಲೇಜಿನ ಪ್ರಾಂಶುಪಾಲ ಡಾ.ನಿಕೇತನ, ಸಾಮಾಜಿಕ ಅರಣ್ಯ ವಲಯ ಹಾಗೂ ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News