×
Ad

ಮಂಡ್ಯ: ಟ್ರ್ಯಾಕ್ಟರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

Update: 2018-07-23 23:11 IST

ಮಂಡ್ಯ, ಜು.23: ಮರದ ದಿಮ್ಮಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ರವಿವಾರ ತಡರಾತ್ರಿ ನಡೆದಿದೆ.

ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಬಣ್ಣನಕೆರೆ ಗ್ರಾಮದ ಅಶೋಕ(23) ಸಾವನ್ನಪ್ಪಿದ ಯುವಕ. ಈತ ಚಿನಕುರಳಿ ಕಡೆಯಿಂದ ಪಾಂಡವಪುರಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಚಿನಕುರಳಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News