ಜಂಟಿ ನಿರ್ದೇಶಕ ಸೇರಿ ಇಬ್ಬರ ಮನೆ ಮೇಲೆ ಎಸಿಬಿ ದಾಳಿ
Update: 2018-07-24 18:36 IST
ಬೆಂಗಳೂರು, ಜು.24: ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯ ಜಂಟಿ ನಿರ್ದೇಶಕ ಎಚ್.ಎಂ.ರೇವಣ್ಣ ಗೌಡ ಸೇರಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿಗಳು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಎಸಿಬಿ ತನಿಖಾಧಿಕಾರಿಗಳು ದಾಳಿ ನಡೆಸಿ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಸರಕಾರಿ ನೌಕರರು ತಮ್ಮ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಮಂಗಳವಾರ ಬೆಂಗಳೂರಿನ ಖನಿಜ ಭವನದಲ್ಲಿರುವ ಕರ್ನಾಟಕ ಉದ್ಯೋಗ ಮಿತ್ರ ಇಲಾಖೆ ಜಂಟಿ ನಿರ್ದೇಶಕ ರೇವಣ್ಣ ಅವರ ಕಚೇರಿ ಹಾಗೂ ಮೂರು ನಿವಾಸಗಳ ಮೇಲೆ ಏಕಾಏಕಿ ದಾಳಿ ನಡೆಸಲಾಯಿತು.
ಅದೇ ರೀತಿ, ಕಲಬುರ್ಗಿಯ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವಿಂದ್ರ, ಅವರ ವಾಸದ ಮನೆ ಸೇರಿ ಒಟ್ಟು 3 ಮನೆಗಳ ಮೇಲೆ ದಾಳಿ ನಡೆಸಿ ತನಿಖೆ ಮುಂದುವರೆಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.