×
Ad

ಬಾದಾಮಿ ಸಹಾಯಕ ಇಂಜಿನಿಯರ್ ಅಮಾನತು

Update: 2018-07-24 20:17 IST

ಬೆಂಗಳೂರು, ಜು.24: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಕುಡಿಯುವ ನೀರು ವಿಭಾಗದ(ಬಾದಾಮಿ) ಸಹಾಯಕ ಇಂಜಿನಿಯರ್ ವೆಂಕಟೇಶ್ ನಾಯಕ್ ಅವರನ್ನು ರಾಜ್ಯ ಸರಕಾರ ಸೇವೆಯಿಂದ ಅಮಾನತುಗೊಳಿಸಿದೆ.

ಕರ್ತವ್ಯಲೋಪದ ಆರೋಪದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ, ಇತ್ತೀಚೆಗೆ ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ನಡೆಸಿದಾಗ ಕುಡಿಯುವ ನೀರಿನ ಘಟಕಗಳ ದುರಸ್ತಿಯಲ್ಲಿ ಲೋಪವಾಗಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಇಂಜಿನಿಯರ್ ಅಮಾನತ್ತಿಗೆ ಸೂಚಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News