×
Ad

ಚಿತ್ರಾಪುರ: ಮನೆಗೆ ನುಗ್ಗಿ ಚಿನ್ನಾಭರಣ ಕಳುವು

Update: 2018-07-24 22:48 IST

ಭಟ್ಕಳ, ಜು. 24:   ತಾಲೂಕಿನ ಶಿರಾಲಿ ಗ್ರಾ.ಪಂ.ವ್ಯಾಪ್ತಿಯ ಚಿತ್ರಾಪುರದ ಮನೆಯೊಂದರ ಬೀಗ ಮುರಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಶಿರಾಲಿ ಚಿತ್ರಪುರ ರೈಲ್ವೆ ಸೇತುವೆ ಬಳಿಯ ಶ್ರೆದೇವಿ ವೆಂಕಟರಮಣ ಭಟ್ಟ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಬೀಗ ಮುರಿದ ಕಳ್ಳರು ಲಕ್ಷಾಂತರ ಮೌಲ್ಯದ ಒಡವೆಗಳನ್ನು ದೋಚಿಕೊಂಡಿದ್ದಾರೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News