ನೀಟ್ ಅಭ್ಯರ್ಥಿಗಳ ಮಾಹಿತಿ ಸೋರಿಕೆ: ಸಿಬಿಎಸ್‌ಇ ಮುಖ್ಯಸ್ಥರಿಗೆ ರಾಹುಲ್ ಪತ್ರ, ತನಿಖೆಗೆ ಆಗ್ರಹ

Update: 2018-07-24 17:26 GMT

ಹೊಸದಿಲ್ಲಿ, ಜು.24: ಈ ವರ್ಷದ ನೀಟ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆಯಾಗಿರುವ ಬಗ್ಗೆ ಮಾದ್ಯಮದ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಿಬಿಸಿಎಸ್‌ಇಗೆ ಪತ್ರ ಬರೆದಿದ್ದಾರೆ.

ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಿರಲು ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) ಅಧ್ಯಕ್ಷೆ ಅನಿತಾ ಕಾರ್ವಾಲ್‌ಗೆ ಬರೆದಿರುವ ಪತ್ರದಲ್ಲಿ ರಾಹುಲ್ ಆಗ್ರಹಿಸಿದ್ದಾರೆ.

ಈ ವರ್ಷದ ನೀಟ್ ಪರೀಕ್ಷೆ ಬರೆದಿರುವ 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳ ಹೆಸರು, ಪೋನ್ ನಂಬರ್, ಇಮೇಲ್ ಐಡಿ ಸಹಿತ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಹಣ ಪಡೆದು ನೀಡಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.

 ಈ ವಿಷಯ ತಿಳಿದು ಆಘಾತವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭವಿಷ್ಯದಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News