ಪ.ಜಾತಿ, ಗಿರಿಜನ ಉಪಯೋಜನೆ ಪಲಾನುಭವಿಗಳ ಆಯ್ಕೆಗೆ ಕರೆ
ಉಡುಪಿ, ಜು.25: ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಈಗಿನಿಂದಲೇ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಸಿ, ಎಸ್‌ಟಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಬುವಾರಮಣಿಪಾಲದಲ್ಲಿರುವಜಿಲ್ಲಾಧಿಕಾರಿಕಚೇರಿಸಾಂಗಣದಲ್ಲಿ ನಡೆದ ಎಸ್‌ಸಿ, ಎಸ್‌ಟಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ನಿಗದಿ ಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿಯನ್ನು ಸಂಪೂರ್ಣವಾಗಿ ಸಾಧಿಸಲು ಎಲ್ಲಾ ಇಲಾಖೆಗಳು ತಕ್ಷಣದಿಂದಲೇ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಕಳದ ಬಾರಿ ಆಯ್ಕೆಯಾದ ಫಲಾನುಭವಿಗಳ ಹೆಸರು ಪುನರಾವರ್ತನೆಯಾಗದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಎಲ್ಲಾ ಇಲಾಖೆಗಳು ತಮ್ಮ ಪ್ರಗತಿ ವರದಿ ಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಪ್ರಿಯಾಂಕ ಸೂಚಿಸಿದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.