×
Ad

ಉಡುಪಿ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Update: 2018-07-25 20:51 IST

ಉಡುಪಿ, ಜು.25: ಅಜ್ಜರಕಾಡಿನ ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂವಹನ ಕ್ಲಬ್(ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಶಾಖೆ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ದಿನಪ್ರತಿಕೆಗಳ ಪ್ರದರ್ಶನ ಕಾರ್ಯಕ್ರಮ ಜು.28ರಂದು ಬೆಳಗ್ಗೆ 10ಕ್ಕೆ ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಷಾ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News