×
Ad

ಕೊಳ್ಳೇಗಾಲ: ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಬೈಕ್ ಸವಾರರು ಮೃತ್ಯು

Update: 2018-07-25 22:48 IST

ಕೊಳ್ಳೇಗಾಲ,ಜು.25: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಮದುವನಹಳ್ಳಿಯ ಅಂಜನೇಯಪುರ ಕ್ರಾಸ್ ಬಳಿ ಬೈಕ್‍ಗೆ ಎದುರಿನಿಂದ ಬಂದ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಧಳದಲ್ಲೇ ಮೃತಪಟ್ಟಿದ್ದಾರೆ. ಮೃತನನ್ನು ದೊಡ್ಡಿಂದುವಾಡಿ ಮಾದೇಶ್ (28) ಎಂದು ಗುರುತಿಸಲಾಗಿದೆ.

ಕುಂತೂರು ಬಳಿ ನಡೆದ ಮತ್ತೊಂದು ಅಪಘಾತದಲ್ಲಿ ಬೈಕ್ ಸವಾರ ಸ್ಧಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೆ.ಆರ್.ನಗರದಿಂದ ಮಹದೇಶ್ವರ ಬೆಟ್ಟಕ್ಕೆ ಬೈಕ್‍ನಲ್ಲಿ ಮೂವರು ತೆರಳುತ್ತಿದ್ದ ಸಂದರ್ಭ ಬಸ್ಸೊಂದು ಕುಂತೂರು ಬಳಿ ಢಿಕ್ಕಿ ಹೊಡೆದಿದೆ. ಈ ವೇಳೆ ಓರ್ವ ಸ್ಧಳದಲ್ಲೇ ಮ್ಥತಪಟ್ಟಿದ್ದಾನೆ. ಇನ್ನಿಬ್ಬರು ತೀವ್ರ ಗಾಯಗೊಂಡಿದ್ದು, ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News