ನಾಯಿ ಕಡಿತ: ಗಾಯಾಳು ಮೃತ್ಯು
Update: 2018-07-25 23:16 IST
ಹಿರಿಯಡ್ಕ, ಜು.25: ಮನೆಯ ನಾಯಿ ಕಡಿತಕ್ಕೆ ಒಳಗಾದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಣಜಾರು ಗ್ರಾಮದ ಮಡಿಬೆಟ್ಟು ನಿವಾಸಿ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಜು.18ರಂದು ಉಜಿರೆಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ನಾಯಿ ಇವರ ಕೈಗೆ ಕಚ್ಚಿತ್ತೆನ್ನಲಾಗಿದೆ. ಈ ಬಗ್ಗೆ ಚಿಕಿತ್ಸೆ ಪಡೆದು ಜು. 24ರಂದು ಗುಲ್ಬರ್ಗಕ್ಕೆ ಕೆಲಸಕ್ಕೆ ಹೋಗಿದ್ದ ಇವರಿಗೆ ಅಲ್ಲಿ ಮೈ ನಡುಕ ಉಂಟಾಗಿ ಆಸ್ಪತ್ರೆಗೆ ದಾಖಲಾದರು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾದ ಆನಂದ ಶೆಟ್ಟಿ ಕೈ ಗಾಯ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಜು.24ರಂದು ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.