ಕಾರ್ಗಿಲ್ ವಿಜಯ್ ದಿವಸ್: ಕದ್ರಿ ಸ್ಮಾರಕದಲ್ಲಿ ನಮನ
Update: 2018-07-26 15:20 IST
ಮಂಗಳೂರು, ಜು. 26: ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶಾಸಕ ಡಿ ವೇದವ್ಯಾಸ್ ಕಾಮತ್ ರವರಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಕದ್ರಿ ಸ್ಮಾರಕದಲ್ಲಿ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಬಿಜೆಪಿ ಮಂಗಳೂರು ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಕಂಡೆಟ್ಟು, ವಾರ್ಡ್ ಅಧ್ಯಕ್ಷ ರಾಮಕೃಷ್ಣ ರಾವ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಸಂತ್ ಜೆ ಪೂಜಾರಿ, ಬಿ ಜೆ ಪಿ ಮಲೆಯಾಳಿ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಕುಮಾರ್, ಮಹಾ ಶಕ್ತಿ ಕೇಂದ್ರ ಸಹ ಸಂಚಾಲಕ್ ಶ್ರೀಕಾಂತ್ ರಾವ್ ಉಪಸ್ಥಿತರಿದ್ದರು.