ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ;ಶೇ 28.3 ತೇರ್ಗಡೆ

Update: 2018-07-26 15:13 GMT

ಬೆಂಗಳೂರು, ಜು.26: ದ್ವಿತೀಯ ಪಿಯು ಪೂರಕ ಪರೀಕ್ಷೆಯಲ್ಲಿ ಶೇ.28.30 ಫಲಿತಾಂಶ ಬಂದಿದ್ದು, ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2,24,879 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 63,652ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 2017ನೆ ಸಾಲಿನ ಪೂರಕ ಪರೀಕ್ಷೆಯಲ್ಲಿ ಶೇ.26.31 ಫಲಿತಾಂಶ ಪ್ರಕಟವಾಗಿದ್ದರೆ, ಈ ಬಾರಿ ಶೇ.28.30ರಷ್ಟು ಫಲಿತಾಂಶ ದಾಖಲಾಗಿದೆ. ಶೇ.2 ರಷ್ಟು ಏರಿಕೆ ಕಂಡಿದೆ.

ಪರೀಕ್ಷೆಗೆ ಹಾಜರಾದ 1,33,216 ಬಾಲಕರ ಪೈಕಿ 35,051ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.26.31ಫಲಿತಾಂಶ ಬಂದಿದೆ. ಹಾಗೆಯೆ 91,663 ಬಾಲಕಿಯ ಪೈಕಿ 28,601 ವಿದ್ಯಾರ್ಥಿನಿಯರು ಪಾಸಾಗಿ ಶೇ.31.20ರಷ್ಟು ಫಲಿತಾಂಶ ಬಂದಿದೆ. ಉತ್ತರ ಪತ್ರಿಕೆಯ ಪ್ರತಿ, ಮರುವೌಲ್ಯಮಾಪನ ಹಾಗೂ ಮರು ಎಣಿಕೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಕಲು ಪ್ರತಿಗೆ ಅರ್ಜಿ ಸಲ್ಲಿಸಲು ಜು.30ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಯ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಆ.4ಕೊನೆಯ ದಿನವಾಗಿದೆ.

ಮರು ಎಣಿಕೆ, ಮರು ವೌಲ್ಯಮಾಪನ ಪೂರ್ಣಗೊಂಡ ನಂತರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಕಾಲೇಜುಗಳಿಗೆ ಕಳುಹಿಸಿಕೊಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News