×
Ad

ಉಡುಪಿ: ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಟ್ಟು ಕಾರ್ಗಿಲ್ ದಿನಾಚರಣೆ

Update: 2018-07-26 19:57 IST

ಮಣಿಪಾಲ, ಜು.26: ‘ಸಂಚಲನ’ ಸಾಮಾಜಿಕ ಸ್ವಯಂ ಸೇವಾ ಸಂಘಟನೆ ಆಯೋಜಿಸಿದ್ದ ‘ಕಾರ್ಗಿಲ್ ವಿಜಯ ದಿವಸ’ ಕಾರ್ಯಕ್ರಮವನ್ನು ಇಂದು ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ 527 ವೀರಯೋಧರ ಹೆಸರಿನಲ್ಲಿ 527 ಗಿಡ ನೆಡುವುದರ ಮೂಲಕ ಅವರ ಬಲಿದಾನವನ್ನು ಸ್ಮರಿಸಿಕೊಳ್ಳಲಾಯಿತು.

ಸಂಚಲನದ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ಮಾತನಾಡಿ, ಸಂಚಲನ ಸಂಸ್ಥೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಕಾರ್ಗಿಲ್ ವಿಜಯ ದಿವಸವನ್ನು 527 ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಡುವ ಮೂಲಕ ಆಚರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಸೈನಿಕರಿಗೆ ಗೌರವ ನಮನಗಳನ್ನು ಸಲ್ಲಿಸುವುದಷ್ಟೇ ಅಲ್ಲದೆ ಯುವಕರಿಗೆ ಭಾರತೀಯ ಸೇನೆಗೆ ಸೇರಲು ಪ್ರೇರೇಪಿಸುವ ಉದ್ದೇಶವನ್ನೂ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ಗಿಲ್ಬರ್ಟ್ ಬ್ರಗಾಂಝ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಹಾಗೂ ನೂರಾರು ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು. ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News