ಗಾಂಜಾ ಮಾರಾಟ: ಆರೋಪಿ ಬಂಧನ

Update: 2018-07-26 15:15 GMT

ಬೆಂಗಳೂರು, ಜು.26: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 1ಕೆಜಿ 220 ಗ್ರಾಂ ಗಾಂಜಾ ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಆರ್‌ಪುರದ ಕಿತ್ತಗನೂರು ರಸ್ತೆಯ ಪದ್ಮೇಶ್ವರಿನಗರದ ನಿವಾಸಿ ಅರ್ಜುನ್(22) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ಕೆಆರ್‌ಪುರಂನ ಖಾಸಗಿ ಕಾಲೇಜು ಬಳಿ ಮಾದಕ ವಸ್ತು ಗಾಂಜಾ ವಶದಲ್ಲಿಟ್ಟುಕೊಂಡು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಇತರೆ ಗಿರಾಕಿಗಳಿಗೆ ಮಾರಾಟ ಮಾಡಲು ಬಂದಿದ್ದಾನೆಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ 1.2 ಕೆಜಿ ಗಾಂಜಾ ಹಾಗೂ ಮೊಬೈಲ್, ತೂಕದ ಯಂತ್ರ, ಪ್ಲಾಸ್ಟಿಕ್ ಚೀಲ ವಶಕ್ಕೆ ಪಡೆದು ಇಲ್ಲಿನ ಕೆಆರ್‌ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News