ಟ್ಯಾಲೆಂಟ್ ಪರೀಕ್ಷೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜು.26: ನಾಗಮನ್ಸ್ ಹೆಲ್ಪಿಂಗ್ ಫೌಂಡೇಷನ್ ವತಿಯಿಂದ 3 ನೆ ವರ್ಷದ ನ್ಯಾಷನಲ್ ಟ್ಯಾಲೆಂಟ್ ಹಂಟರ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ನಗರದ ಪ್ರೆಸ್‌ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಷನ್‌ನ ಸಿಇಒ ಮಹಮದ್ ಲೇಟೀಫ್, ಪರೀಕ್ಷೆಯಲ್ಲಿ 5 ನೆ ತರಗತಿಯಿಂದ ಪದವಿವರೆಗೂ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಹೇಳಿದರು.
ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನದ ಆಧಾರದ ಮೇಲೆ ಪರೀಕ್ಷೆಗಳು ನಡೆಯುತ್ತವೆ. ಕನಿಷ್ಠ 46 ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ 500 ರೂ.ನಿಂದ 20 ಸಾವಿರದವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಜತೆಗೆ, ಶೇ.90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ವಾರ್ಷಿಕ ಶುಲ್ಕವನ್ನು ಫೌಂಡೇಷನ್ ಭರಿಸುತ್ತದೆ ಎಂದು ಹೇಳಿದರು.
ಪರೀಕ್ಷೆಯಲ್ಲಿ ಪಾಲ್ಗೊಳ್ಳುವವರಿಗೆ ಪ್ರಮಾಣಪತ್ರ ನೀಡಲಾಗುತ್ತದೆ. ಹೆಚ್ಚು ಅಂಕ ಪಡೆದವರಿಗೆ ಟ್ರೋಫಿ ನೀಡಲಾಗುತ್ತದೆ ಹಾಗೂ ಹೈದರಾಬಾದ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂಟರ್‌ನ್ಯಾಷನಲ್ ಐಕಾನಿಕ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.
ಕರ್ನಾಟಕದಲ್ಲಿ ಬೆಂಗಳೂರಿನ ಇಂಟರ್ ಐಕಾನಿಕ್ ಫೆಡರೇಷನ್, 3 ನೆ ಮಹಡಿ, ರಾಶಿ ಡಯಾಗ್ನೋಸ್ಟಿಕ್ ಸೆಂಟರ್ ಕಟ್ಟಡ, ಕಮ್ಮನಹಳ್ಳಿ ಮುಖ್ಯ ರಸ್ತೆ, ಕಮ್ಮನಹಳ್ಳಿ, ಬೆಂಗಳೂರು-84(6360636512), ಹುಬ್ಬಳ್ಳಿ-ಧಾರವಾಡದಲ್ಲಿ ಅಪಧಮನಿ ಪಬ್ಲಿಕ್ ಶಾಲೆ(98805 66627), ಮುರ್ಡೇಶ್ವರದ ಬೀನಾವೈದ್ಯ ಇಂಟರ್ ನ್ಯಾಷನಲ್ ಶಾಲೆ, ಬೆಳಗಾವಿ(80736 86667), ಮೈಸೂರು(97384 41677) ನಗರಗಳಲ್ಲಿ ಆ.18 ರಂದು ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.