ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ಆ.31ರವರೆಗೆ ವಿಸ್ತರಣೆ

Update: 2018-07-26 16:39 GMT

ಹೊಸದಿಲ್ಲಿ, ಜು.26: 2018-19ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿತ್ತ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಹೊಸ ಫಾರ್ಮ್‌ಗಳನ್ನು ಈ ವರ್ಷದ ಎಪ್ರಿಲ್‌ನಲ್ಲಿ ಸರಕಾರ ಪ್ರಕಟಿಸಿತ್ತು ಮತ್ತು ತೆರಿಗೆ ಪಾವತಿದಾರರಿಗೆ ಜುಲೈ 31ರವರೆಗೆ ಇ-ಫೈಲಿಂಗ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ‘ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್(ಸಿಬಿಡಿಟಿ) ನಿಗದಿ ಮಾಡಿದ ಕಾಲಮಿತಿಯನ್ನು ವಿಸ್ತರಿಸಿದ್ದು 2018ರ ಆಗಸ್ಟ್ 31ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News