ಕಾರ್ಗಿಲ್ ವಿಜಯ್ ದಿವಸ್...

Update: 2018-07-26 18:18 GMT

ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ನೌಕಾ ಪಡೆಯ ವರಿಷ್ಠ ಸುನೀಲ್ ಲಾಂಬಾ, ಸೇನಾ ವರಿಷ್ಠ ಜನರಲ್ ಬಿಪಿನ್ ರಾವತ್ ಹಾಗೂ ಭಾರತೀಯ ವಾಯು ಪಡೆಯ ವರಿಷ್ಠ ಬಿ.ಎಸ್. ಧಾನಾವೊ ಗುರುವಾರ ನಮನ ಸಲ್ಲಿಸಿದರು. ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor