ತಮಿಳುನಾಡು ಮಾಜಿ ಸಿ.ಎಂ ಕರುಣಾನಿಧಿ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ
Update: 2018-07-27 17:59 IST
ಬೆಂಗಳೂರು, ಜು.27: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಪರಮೋಚ್ಛ ನಾಯಕ ಎಂ.ಕರುಣಾನಿಧಿಯ ಆರೋಗ್ಯದ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಚಾರಿಸಿದ್ದಾರೆ.
ಶುಕ್ರವಾರ ಕರುಣಾನಿಧಿಯ ಪುತ್ರ ಹಾಗೂ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಕುಮಾರಸ್ವಾಮಿ, ಅವರ ಆರೋಗ್ಯದ ಕುರಿತು ವಿಚಾರಿಸಿದ್ದಲ್ಲದೆ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.