ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಅನಗತ್ಯ: ಎಂ.ಬಿ.ಪಾಟೀಲ್

Update: 2018-07-27 12:48 GMT

ವಿಜಯಪುರ, ಜು.27: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಹೋರಾಟ ನಡೆಸುವುದು ಅನಗತ್ಯ. ಅದರ ಬದಲು ಈ ಭಾಗದ ಅಭಿವೃದ್ಧಿಗಾಗಿ ಶ್ರಮಿಸಬೇಕಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಸಮಗ್ರ ಕರ್ನಾಟಕ ನಮ್ಮ ಕಲ್ಪನೆಯಾಗಿರಬೇಕು. ಪ್ರತ್ಯೇಕ ರಾಜ್ಯದ ಕೂಗು ಸಮಂಜಸವಲ್ಲ ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿಯಾಗಿಲ್ಲ ಎಂಬ ನೋವಿದೆ. ಈ ಭಾಗದ ಅಭಿವೃದ್ಧಿಗಾಗಿ ಅಗತ್ಯವಿರುವ ಯೋಜನೆಗಳನ್ನು ತರಲು ಹೋರಾಟ ಮಾಡಬೇಕಿದೆ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಗೃಹ ಸಚಿವನಾಗಿದ್ದರೆ ಬುದ್ಧಿಜೀವಿಗಳಿಗೆ ಗುಂಡಿಕ್ಕಿ ಸಾಯಿಸುವಂತೆ ಆದೇಶ ನೀಡುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ಅವರು ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆಗೆ ಪೈಪೋಟಿ ನೀಡುತ್ತಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News