×
Ad

​ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ: ಮೊಯ್ದಿನ್ ಬಾವ

Update: 2018-07-27 19:23 IST

ಮಂಗಳೂರು, ಜು.27: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ತೈಲ ಬೆಲೆ ಸಹಿತ ದಿನಬಳಕೆಯ ವಸ್ತುಗಳ ಬೆಲೆ ಏರಿಸಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿರುವುದಾಗಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಯುವಜನತೆಗೆ ಉದ್ಯೋಗ ಕಲ್ಪಿಸುವ ಭರವಸೆ ಇನ್ನೂ ಈಡೇರಿಲ್ಲ.ಜಿಎಸ್‌ಟಿ ಜಾರಿಯಿಂದ ಜನತೆ ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಗುರುಪುರ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಪ್ರಮುಖರಾದ ಜಿ.ಎಸ್.ಮೆಲ್ವಿನ್, ಗಣೇಶ್ ಪೂಜಾರಿ, ಎಂ.ಕೆ.ಯೂಸುಫ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News