×
Ad

ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘ ಅಸ್ತಿತ್ವಕ್ಕೆ

Update: 2018-07-27 19:23 IST

ಮಂಗಳೂರು, ಜು.27: ಪ್ರಾದೇಶಿಕ ಚಲನಚಿತ್ರಗಳನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಚಲನಚಿತ್ರ ನಿರ್ಮಾಪಕ ಆರ್. ಧನರಾಜ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ತುಳು, ಬ್ಯಾರಿ, ಕೊಂಕಣಿ, ಕೊಡವ ಮತ್ತು ಲಂಬಾಣಿ ಭಾಷೆಯನ್ನೊಳಗೊಂಡಂತೆ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘ ರಚನೆಯಾಗಲಿದೆ. ಈ ಸಂಘವನ್ನು ಆಗಸ್ಟ್ ತಿಂಗಳೊಳಗೆ ಉದ್ಘಾಟನೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆರ್.ಧನರಾಜ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News