ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ

Update: 2018-07-27 14:28 GMT

ಬೆಂಗಳೂರು, ಜು.27: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಪೊಲೀಸ್ ಎಂದು ಪರಿಚಯಿಸಿಕೊಂಡು, ಬೆದರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಯಲಹಂಕ ಉಪನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್ ಅಂಗಡಿಯೊಂದರ ಮಾಲಕ ಶ್ರೀನಾಥ್ (32) ಬಂಧಿತ ಆರೋಪಿಯಾಗಿದ್ದು, ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲಹಂಕ ಪಾರ್ಕ್‌ನಲ್ಲಿ ಕುಳಿತಿದ್ದ 17 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ತಾನು ಕ್ರೈಂ ಪೊಲೀಸ್ ಎಂದು ಪರಿಚಯಿಸಿಕೊಂಡು ಮಾತನಾಡಿಸಿದ್ದಾನೆ. ಜುಲೈ 23 ರಂದು ಈ ವಿದ್ಯಾರ್ಥಿನಿ ಸಿಕ್ಕಾಗ ಮತ್ತೊಮ್ಮೆ ಮಾತನಾಡಿಸುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಮನೆಯೊಂದರಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ವಿದ್ಯಾರ್ಥಿನಿ ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News