ಪುತ್ರಿಯನ್ನೇ ಅತ್ಯಾಚಾರಗೈದ ಪ್ರಕರಣ: ಆರೋಪಿ ತಂದೆಗೆ 5 ವರ್ಷ ಜೈಲು ಶಿಕ್ಷೆ

Update: 2018-07-27 14:30 GMT

ಬೆಂಗಳೂರು, ಜು.27: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ಅತ್ಯಾಚಾರವೆಗಿಸಿದ್ದ ಆರೋಪದಡಿ ತಂದೆಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 

ಪ್ರಕರಣದ ವಿವರ: 2017ರ ಆ.29ರಂದು 14 ವರ್ಷದ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಆದ ಆರೋಪಿ ರವಿಕುಮಾರ್ ಅತ್ಯಾಚಾರವೆಸಗಿರುವ ಸಂಬಂಧ ಇಲ್ಲಿನ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ದೂರಿನನ್ವಯ ಪೋಕ್ಸೋ ಆಕ್ಟ್-2012 ಅಡಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನಗರದ ಸಿವಿಲ್ ಸೇಷನ್ಸ್-54ನೆ ನ್ಯಾಯಾಲಯಕ್ಕೆ ಆರೋಪಿಯ ವಿರುದ್ದ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿ ರವಿಕುಮಾರ್‌ಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ಚಿನ್ನ ವೆಂಕಟರಮಣಪ್ಪ ಆರೋಪಿಗೆ ಶಿಕ್ಷೆ ನೀಡಲು ಸಮರ್ಥವಾಗಿ ವಾದ ಮಂಡಿಸಿದ್ದರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News