×
Ad

ಕಾರ್ಪೊರೇಶನ್ ಬ್ಯಾಂಕ್ ನಿವೃತ್ತ ಅಧಿಕಾರಿಗ ಸಂಘದ ಸಂಸ್ಥಾಪನಾ ದಿನಾಚರಣೆ

Update: 2018-07-27 20:25 IST

ಮಂಗಳೂರು, ಜು.27: ಕಾರ್ಪೊರೇಶನ್ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ ವತಿಯಿಂದ ನಗರದ ಕಾರ್ಪೊರೇಶನ್ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ ಸಭಾಂಗಣದಲ್ಲಿ ಸಂಘದ 23ನೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾರ್ಪೊರೇಶನ್ ಬ್ಯಾಂಕ್‌ನ ಆಡಳಿತ ನಿರ್ದೇಶಕ ಗೋಪಾಲ್ ಮುರಳಿ ಭಗತ್ ,ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಏಕನಾಥ್ ಬಾಳಿಗ, ಪ್ರಧಾನ ಕಾರ್ಯದರ್ಶಿ ಸತೀಶ್, ನಿವೃತ್ತ ಅಧಿಕಾರಿಗಳ ಸಂಘದ ಅಧ್ಯಕ್ಷ ರಾಜ್ ಭೂಷಣ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಪ್ರಕಾಶ್, ಉಪಾಧ್ಯಕ್ಷ ಕೆ.ವಿ.ನಾಯಕ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ 80 ಕ್ಕೂ ಮೇಲ್ಪಟ್ಟ ಸುಮಾರು 21ನಿವೃತ್ತ ಅಧಿಕಾರಿಗಳನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಕಾರ್ಪೊರೇಶನ್ ಬ್ಯಾಂಕ್‌ನ ನಿವೃತ್ತ ಅಧಿಕಾರಿಗಳ ಸಂಘಟನೆಯ ಚೈತನ್ಯ ಯೋಜನೆಯ ಪ್ರಕಾರ ಬಂಟ್ವಾಳ ತಾಲೂಕಿನ ವೀರ ಕಂಬದ ಮಜಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಶೀಥಲೀಕರಣ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News