×
Ad

ದೇರಳಕಟ್ಟೆ: 'ಸ್ವಚ್ಚ ಭಾರತ್ ಸಮ್ಮರ್ ಇಂಟರ್ನ್‌ಶಿಪ್' ಕಾರ್ಯಕ್ರಮ

Update: 2018-07-27 20:36 IST

ಕೊಣಾಜೆ, ಜು. 27: ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ನಿಟ್ಟೆ ಫಾರ್ಮಸಿ ಕಾಲೇಜು, ಮತ್ತು ನಿಟ್ಟೆ ನರ್ಸಿಂಗ್ ಕಾಲೇಜು,  ಹಾಗೂ ಬೆಳ್ಮ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‌ಶಿಫ್ ಉದ್ಘಾಟನಾ ಕಾರ್ಯಕ್ರಮವು ಬೆಳ್ಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಅವರು, ಭಾರತ ದೇಶ ಅಭಿವೃದ್ದಿಯಾಗಬೇಕಾದರೆ ಯುವಜನಾಂಗ ಸ್ವಚ್ಛತೆಯನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗದೊಂದಿಗೆ ಸ್ಥಳೀಯ ಸಂಸ್ಥೆಗಳು ಕೈಗೂಡಿಸಿದಲ್ಲಿ ಮಾತ್ರ ಸ್ವಚ್ಛತೆಯನ್ನು ಅಳವಡಿಸಲು ಸಾಧ್ಯ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆ.ಎಸ್ ಹೆಗ್ದೆ ಮೆಡಿಕಲ್ ಅಕಾಡೆಮಿಯ ವೈಸ್ ಡೀನ್ ಪ್ರೊ. ಡಾ. ಜಯಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಸಿ. ಎಸ್. ಶಾಸ್ತ್ರಿ, ನಿಟ್ಟೆ ನರ್ಸಿಂಗ್ ಕಾಲೇಜಿನ ಡಾ. ನೀತಾ ಕಾಮ,   ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಜಯ, ತಾಲೂಕು ಪಂ. ಸದಸ್ಯರಾದ ನೂರ್‌ಜಹಾನ್, ಎನ್‌ಎಸ್‌ಎಸ್ ಕಾರ್ಯನಿರ್ವಾಹಕರಾದ ಶಶಿಕುಮಾರ್ ಶೆಟ್ಟಿ, ನೋಡೆಲ್ ಅಧಿಕಾರಿ ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು. 

ಬೆಳ್ಮ ಗ್ರಾಮ ಪಂ. ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ಸ್ವಾಗತಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ ವಂದಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಕ್ಲೇಟ್ ಪಿಂಟೊ ಆಫೀಸರ್ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News