ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ
Update: 2018-07-27 20:55 IST
ಬಂಟ್ವಾಳ, ಜು. 27: ವ್ಯಕ್ತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಅಲ್ಲಿಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿನ ದೇವಶ್ಯಪಡೂರು ಗ್ರಾಮದ ಅಲ್ಲಿಪಾದೆ ಸಮೀಪದ ಹತ್ತಳಿಕೆ ನಿವಾಸಿ ಲಿಂಗಪ್ಪ (38) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕಾರ್ಮಿಕರಾಗಿದ್ದ ಲಿಂಗಪ್ಪ ಅವರು, ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುವ ಕೆಲಸ ಮಾಡುತ್ತಿದ್ದು, ಶುಕ್ರವಾರ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಉಳಿದಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.