×
Ad

ಉಡುಪಿ: ಸ್ವಾತಂತ್ರ ದಿನಾಚರಣೆ ಪೂರ್ವಭಾವಿ ಸಭೆ

Update: 2018-07-27 22:11 IST

ಉಡುಪಿ, ಜು.27: ಆ.15ರಂದು ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರ ದಿನಾಚರಣೆ ಕುರಿತಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಆ.15ರಂದು ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗಮಂದಿರದಲ್ಲಿ ನಡೆಯುವ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪಥ ಸಂಚಲನ ನಡೆಸುವ ಕುರಿತಂತೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮ ನಡೆಯುವ ದಿನದಂದು ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವಂತೆ ಆರ್‌ಟಿಓ ಅಧಿಕಾರಿಗೆ ಸೂಚಿಸಿದರು.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಹಾಗೂ ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕುರಿತಂತೆ ಪಟ್ಟಿಯನ್ನು ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿಯ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಿದ ವ್ಯಕ್ತಿಗಳಿಗೆ ಸನ್ಮಾನ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅವರ ಪಟ್ಟಿಯನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿವಿಧ ಇಲಾಖೆಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರಗಳನ್ನು ತೆರೆಯುವಂತೆಮತ್ತು ಸಮಾರಂಭದ ಪ್ರಾರಂಭದಿಂದ ಮುಕ್ತಾಯದವರೆಗೆ ಎಲ್ಲಾ ಹಂತದಲ್ಲೂ ಹಸಿರು ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸ್ವಾತಂತ್ರೋತ್ಸವ ದಿನದಂದು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಸ್ವಾತಂತ್ರೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ನೇತೃತ್ವದ ವಿವಿಧ ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News