×
Ad

ಅನುದಾನಿತ ಶಾಲೆಗೆ 6ನೇ ವೇತನ ಜಾರಿ: ಕೆ.ಎಂ.ಕೆ. ಮಂಜನಾಡಿ

Update: 2018-07-27 23:03 IST

ಮಂಗಳೂರು, ಜು.27: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವ್ಯಾಪ್ತಿಯ ಅನುದಾನಿತ ಶಾಲೆಗಳಿಗೆ 6ನೇ ವೇತನವನ್ನು ಶುಕ್ರವಾರ ಅನುಷ್ಠಾನ ಗೊಳಿಸಲಾಗಿದೆ ಎಂದು ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ ತಿಳಿಸಿದ್ದಾರೆ.

ರಾಜ್ಯ ಸರಕಾರಿ ನೌಕರರಿಗೆ ಜಾರಿಯಾದ ಆರನೇ ವೇತನ ಸೌಲಭ್ಯಗಳು ಕೆಲವೊಂದು ತಾತ್ರಿಕ ಕಾರಣಗಳಿದಾಗಿ ಇದುವರೆಗೂ ಅನುದಾನಿತ ವಿದ್ಯಾ ಸಂಸ್ಥೆಗಳ ಸಿಬ್ಬಂದಿಗೆ ಅನುಷ್ಠಾನವಾಗಿರಲಿಲ್ಲ. ಇದೀಗ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಮತ್ತು ಕಾರ್ಯದರ್ಶಿ ರವಿಕುಮಾರ್ ಮನವಿ ಮೇರೆಗೆ ಶಿಕ್ಷಣ ಸಚಿವರು 6ನೇ ವೇತನ ಅನುಷ್ಠಾನ ಬಗ್ಗೆ ಸೂಚನೆ ನೀಡಿದ್ದಾರೆ.

ಅದರಂತೆ ರಾಜ್ಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯು ಅನುದಾನಿತ ಶಿಕ್ಷಣ ಸಂಸ್ಥೆಗಳಿಗೂ ಆರನೇ ವೇತನ ಅನುಷ್ಠಾನಗೊಳಿಸುವಂತೆ ಆದೇಶ ನೀಡಿದ್ದಾರೆ ಎಂದು ಮಂಜನಾಡಿ ತಿಳಿಸಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಮತ್ತು ಸ್ಥಳೀಯ ಸಂಸ್ಥೆಗಳ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ 6ನೇ ವೇತನ ವಿಸ್ತರಿಸಲಾಗಿದೆ. ಈ ಕುರಿತು ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News