ಮೈಸೂರು: ಯೋಗ ಸೆಂಟರ್ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ; ಐವರ ಬಂಧನ

Update: 2018-07-27 17:53 GMT

ಮೈಸೂರು,ಜು.27: ಯೋಗ ಸೆಂಟರ್ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.

ಬೇರೆ ರಾಜ್ಯಗಳ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂದೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಯೋಗ ಕೋರ್ಸ್ ಸೆಂಟರ್ ಹೆಸರಿನಲ್ಲಿ ನಡೆಯುತ್ತಿತ್ತು. ಮೈಸೂರಿನ ರಮಾವಿಲಾಸ ರಸ್ತೆಯ ಮನೆಯೊಂದರಲ್ಲಿ ದಂದೆ ನಡೆಯುತ್ತಿದ್ದು, ಖಚಿತ ಮಾಹಿತಿಯೊಂದಿಗೆ ಅಡ್ಡೆ ಮೇಲೆ ಪೊಲೀಸರು ಒಡನಾಡಿ ಸಂಸ್ಥೆ ಸಹಯೋಗದಲ್ಲಿ ದಾಳಿ ನಡೆಸಿದ್ದಾರೆ. 

ದಾಳಿಯಲ್ಲಿ ಒಟ್ಟು 7 ಯುವತಿಯರನ್ನು ರಕ್ಷಿಸಲಾಗಿದ್ದು, ಐವರು ಯುವಕರನ್ನು ಬಂಧಿಸಲಾಗಿದೆ. ಹೊರಗೆ ಯೋಗ ಸೆಂಟರ್ ಫಲಕವಿದ್ದು, ಒಳಗೆ ಬಾಡಿ ಮಸಾಜ್ ಗೆ ಆಫರ್ ಮಾಡುತ್ತಿದ್ದರು ಎನ್ನಲಾಗಿದೆ. ನಿತ್ಯ ಸಾವಿರಾರು ಮಂದಿ ಓಡಾಡುವ ರಸ್ತೆಯಲ್ಲೇ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎನ್ನಲಾಗಿದ್ದು, ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News