×
Ad

ಉಡುಪಿ: ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟನೆ

Update: 2018-07-28 19:54 IST

ಉಡುಪಿ, ಜು. 28: ಪರ್ಯಾಯ ಪಲಿಮಾರು ಮಠ ಮತ್ತು ರೋಟರಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪ್ರಸ್ತುತ ಹತ್ತನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಕಲಿಕಾ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’ ಮತ್ತು ಸುರಕ್ಷತೆ ಹಾಗೂ ರಸ್ತೆ ಸಂಚಾರ ಜಾಗೃತಿ ಶಿಬಿರವನ್ನು ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥರು ಉದ್ಘಾಟಿಸಿದರು.

ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥರು  ಸಂದೇಶ ನೀಡಿದರು. ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕಿನ ಮಹಾಪ್ರಬಂಧಕ ಭಾಸ್ಕರ ಹಂದೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ, ವಲಯ 4ರ ಅಸಿಸ್ಟಂಟ್ ಗವರ್ನರ್ ಡಾ.ಗಣೇಶ್ ಎ., ಪೆರ್ಡೂರು ರೋಟರಿ ಅಧ್ಯಕ್ಷ ರಾಮದಾಸ ನಾಯಕ್ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ರೋಟರಿ ಅಧ್ಯಕ್ಷ ಎ.ಎಸ್. ಚಂದ್ರಶೇಖರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಎ.ವಿ.ಬಾಳಿಗಾ ಆಸ್ಪತ್ರೆ ಯ ಮನಶಾಸ್ತ್ರಜ್ಞ ನಾಗರಾಜ ಮೂರ್ತಿ, ಕೆಎಂಸಿ ಮಣಿಪಾಲದ ಮನೋವಿಜ್ಞಾನ ವಿಭಾಗದ ಸಪ್ನಾ ಗಣೇಶ್, ಮಂಗಳೂರಿನ ಬೆಸೆಂಟ್ ಇನ್‌ಸ್ಟಿಟ್ಯೂಟ್‌ನ ಡಾ.ನಾರಾಯಣ ಕಾಯರಕಟ್ಟೆ, ಉಡುಪಿ ರೋಟರಿಯ ಡಾ.ಸುರೇಶ ಶೆಣೈ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News