×
Ad

ವೈದ್ಯಕೀಯ ಕ್ಷೇತ್ರದಲ್ಲಿ ಭಾರತದ ಪ್ರಗತಿ ಸಾಲದು: ಸಿಎನ್‌ಆರ್ ರಾವ್

Update: 2018-07-28 20:15 IST

ಬೆಂಗಳೂರು, ಜು.28: ವೈದ್ಯಕೀಯ ಕ್ಷೇತ್ರದಲ್ಲಿ ಭಾರತದ ಪ್ರಗತಿ ತೃಪ್ತಿಕರವಾಗಿಲ್ಲ. ಈ ಕ್ಷೇತ್ರದ ಕಡೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ವಿಶೇಷ ಆಸಕ್ತಿ ವಹಿಸಬೇಕಿದೆ ಎಂದು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸಿಎನ್‌ಆರ್ ರಾವ್ ಅಭಿಪ್ರಾಯಿಸಿದರು.

ಶನಿವಾರ ನಗರದ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ನ್ಯೂಕ್ಲಿಯರ್ ಕ್ಲಿನಿಕ್‌ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಣ್ಣ ದೇಶವಾದ ಇಸ್ರೇಲ್ ನ್ಯಾನೋ ಟೆಕ್ನಾಲಜಿಯನ್ನು ವೈದ್ಯಕೀಯ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅಳವಡಿಸಿಕೊಂಡಿದೆ. ಆದರೆ, ಭಾರತದ ವೈದ್ಯಕೀಯ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಸಂಶೋಧನೆಗಳು ನಡೆಯಬೇಕಿದೆ ಎಂದು ಅಭಿಪ್ರಾಯಿಸಿದರು.

ದೇಶದ ವೈದ್ಯಕೀಯ ಕ್ಷೇತ್ರದ ಸಂಶೋಧನೆಗೆ ಆರ್ಥಿಕ ಸಹಾಯ ಅಗತ್ಯವಿದೆ. ಹಾಗೂ ಎಲ್ಲ ವರ್ಗದ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರದ ಪ್ರವೇಶಕ್ಕೆ ಮುಕ್ತ ಅವಕಾಶವಿರಬೇಕು. ಈ ನಿಟ್ಟಿನಲ್ಲಿ ಸರಕಾರ ವಿಶೇಷ ಅನುದಾನಗಳನ್ನು ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದರು.

ಇತರೆ ದೇಶಗಳಲ್ಲಿ ಆಯಾ ಸರಕಾರಗಳ ಜೊತೆಗೆ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೈ ಜೋಡಿಸಿವೆ. ಹೀಗಾಗಿಯೆ ಆ ದೇಶಗಳಲ್ಲಿ ವೈದ್ಯಕೀಯ ಕ್ಷೇತ್ರವು ಆಧುನಿಕ ತಂತ್ರಜ್ಞಾನವನ್ನು ಯಶಸ್ವಿಯಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗಿದೆ. ಅದೇ ಮಾದರಿಯಲ್ಲಿ ಭಾರತ ಸರಕಾರದೊಂದಿಗೆ ಖಾಸಗಿ ವೈದ್ಯಕೀಯ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಅವರು ಆಶಿಸಿದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News