×
Ad

ಅಪರಿಚಿತ ವಾಹನ ಢಿಕ್ಕಿ: ಲ್ಯಾಬ್‍ ಟೆಕ್ನಿಷಿಯನ್ ಮೃತ್ಯು

Update: 2018-07-28 20:26 IST

ನಾಗಮಂಗಲ,ಜು.28: ಅಪರಿಚಿತ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೀದರ್ ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಕಾಚೇನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ತಾಲೂಕಿನ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಲ್ಯಾಬ್‍ ಟೆಕ್ನಿಷಿಯನ್ ಆಗಿದ್ದ ಹಾಗೂ ಪಟ್ಟಣದ ಜನರಲ್ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಉಷಾ ಅವರ ಪತಿ ರವಿ(40) ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದಾರೆ. 

ಚುಂಚನಗಿರಿ ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ನಾಗಮಂಗಲಕ್ಕೆ ಬೈಕ್‍ನಲ್ಲಿ ವಾಪಸ್ ಬರುತ್ತಿದ್ದಾಗ ಸುಮಾರು ರಾತ್ರಿ 9.30ರಲ್ಲಿ ಕಾಚೇನಹಳ್ಳಿ ಬಳಿ ಯಾವುದೋ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರವಿ ರಕ್ತಸ್ರಾವದಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬೈಕ್‍ನ ಮುಂಭಾಗ ನಜ್ಜು ಗುಜ್ಜಾಗಿದ್ದು, ಈ ಸಂಬಂಧ ಪಟ್ಟಣ ಠಾಣೆ ಪೊಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ರವಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನವರಾಗಿದ್ದು, ನಾಗಮಂಗಲ ಪಟ್ಟಣದಲ್ಲಿ ವಾಸವಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News