ಅವಧಿ ವಿಸ್ತರಣೆ

Update: 2018-07-28 16:03 GMT

ಬೆಂಗಳೂರು, ಜು.28: ಜೂನ್-2018ರ ಎಸೆಸೆಲ್ಸಿ ಪೂರಕ ಪರೀಕ್ಷೆಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಛಾಯಾಪ್ರತಿಗಾಗಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಆ.6ರವರೆಗೆ ವಿಸ್ತರಿಸಲಾಗಿದೆ.

ಎಸೆಸೆಲ್ಸಿ ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕಾನ್ ಪ್ರತಿಯನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಮೊದಲು ಜು.30ಕ್ಕೆ ನಿಗದಿ ಪಡಿಸಲಾಗಿತ್ತು. ಇದನ್ನು ಈಗ ಆ.6ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News