×
Ad

ಚಾಮರಾಜನಗರ: ನಗರಸಭೆಯ ವತಿಯಿಂದ ಸಚಿವ ಪುಟ್ಟರಂಗಶೆಟ್ಟಿಗೆ ಪೌರ ಸನ್ಮಾನ

Update: 2018-07-28 22:56 IST

ಚಾಮರಾಜನಗರ, ಜು.28: ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ರವರಿಗೆ ನಗರಸಭೆಯ ವತಿಯಿಂದ ಪೌರ ಸನ್ಮಾನ ಮಾಡಲಾಯಿತು.

ನಗರಸಭಾ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಶಾಲು ಹೊದೆಸಿ ಪುಷ್ಪಗುಚ್ಛ ನೀಡಿ ಗೌರವ ಸಮರ್ಪಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಕೇಂದ್ರಕ್ಕೆ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದರು. ಈ ಸರ್ಕಾರದ ಅವಧಿಯಲ್ಲೂ ಸಹಾ ನಾನು ನಗರದ ಸಮಗ್ರ ಕುಡಿಯುವ ನೀರಿನ ಸರಬರಾಜಿಗಾಗಿ ವಿಶೇಷ ಅನುದಾನಗಳನ್ನು ಬಿಡುಗಡೆ ಮಾಡಿಸುತ್ತೇನೆ. ಮುಂದೆ ಪಟ್ಟಣದ ಅಭಿವೃದ್ಧಿಗೆ ಸದಸ್ಯರೆಲ್ಲರೂ ಕೈ ಜೋಡಿಸಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಸಂಸದ ಆರ್.ದೃವನಾರಾಯಣ್ ಮಾತನಾಡಿ, ನಿಮ್ಮೆಲ್ಲರ ಆಶೀರ್ವಾದದಿಂದ ಮೂರನೇ ಬಾರಿಯೂ ಆಯ್ಕೆಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವರಾಗಿದ್ದು, ನಗರದ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಸರಳ ಸಜ್ಜನಿಕೆಯ ಪುಟ್ಟರಂಗಶೆಟ್ಟರು ಎಲ್ಲಾ ವರ್ಗಗಳ ಒಡನಾಡಿ ಇಟ್ಟುಕೊಂಡು ಅವರ ನಾಡಿಮಿಡಿತ ಅರಿತಿದ್ದಾರೆ. ಇವರ ಶಾಸಕತ್ವದ ಅವಧಿಯಲ್ಲಿ ಅನೇಕ ಜನಪರ ಕೆಲಸಗಳು ಆಗಿದ್ದು, ಈ ಬಾರಿ ಸಚಿವರಾಗಿರುವುದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಪೂರಕವಾದ ಕೆಲಸವನ್ನು ಮಾಡಲಿದ್ದಾರೆಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭಾದ್ಯಕ್ಷೆ ಶೋಭಾ ಪುಟ್ಟಸ್ವಾಮಿ, ಉಪಾದ್ಯಕ್ಷ ರಾಜಪ್ಪ, ನಗರಸಭಾ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಸದಸ್ಯರು ಸೇರಿದಂತೆ ಪೌರಾಯುಕ್ತ ರಾಜಣ್ಣ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News