×
Ad

ಮಂಡ್ಯ: ಕಾರಿ ಢಿಕ್ಕಿಯಾಗಿ ಅಪರಿಚಿತ ಮೃತ್ಯು

Update: 2018-07-29 19:39 IST

ಮಂಡ್ಯ, ಜು.29: ಕಾರು ಢಿಕ್ಕಿಯಾಗಿ ರಸ್ತೆದಾಟುತ್ತಿದ್ದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಕಾರಿನಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡರು. ಆ ವೇಳೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು.

ಶವವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿಡಲಾಗಿದ್ದು, ಈ ಸಂಬಂಧ ನಗರದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News