ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬೆಳ್ತಂಗಡಿಯ ಕೊಕ್ಕಡದ ವ್ಯಕ್ತಿ ಪೊಲೀಸ್ ವಶಕ್ಕೆ?
Update: 2018-07-29 20:41 IST
ಉಪ್ಪಿನಂಗಡಿ, ಜು.29: ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬೆಳ್ತಂಗಡಿಯ ಕೊಕ್ಕಡದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಪೊಲೀಸರು ದೃಢಪಡಿಸಿಲ್ಲ.
ಕೊಕ್ಕಡ ಮೂಲದ ಜಯರಾಮ ಯಾನೆ ಪೊಡಿಯ ಎಂಬಾತನನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದ್ದು, ಈ ಹಿಂದೆ ಈತ ಸನಾತನ ಸಂಸ್ಥೆಯಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.