×
Ad

ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರೇಖಾ ಹುಲಿಯಪ್ಪಗೌಡ ನೇಮಕ

Update: 2018-07-29 21:04 IST

ಚಿಕ್ಕಮಗಳೂರು, ಜು.29: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್‍ನ ಉಪಧ್ಯಾಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಕಟಣೆ ತಿಳಿಸಿದೆ. 

ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್‍ನ ವಕ್ತಾರೆ ಚೇತನಾ, ರಾಜ್ಯ ಮಹಿಳಾ ಕಾಂಗ್ರೆಸ್‍ನ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರು ರೇಖಾಹುಲಿಯಪ್ಪಗೌಡ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ರೇಖಾ ಹುಲಿಯಪ್ಪಗೌಡ ಕಳದ 2 ದಶಕಗಳಿಂದ ಜಿಲ್ಲಾ ರಾಜಕಾರಣದಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಅವರು ಬಿಜೆಪಿ ಪಕ್ಷದಿಂದ ಲಕ್ಯಾ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಸ್ಪರ್ಧಿಸಿ 2000 ಹಾಗೂ 2010ನೇ ಸಾಲಿನಲ್ಲಿ ಎರಡು ಬಾರಿ ಜಿಪಂ ಸದಸ್ಯೆಯಾಗಿ ಆಯ್ಕೆಯಾಗಿದ್ದರು. 2012 ರಿಂದ 2014ರವರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಯಶಸ್ವಿ ಆಡಳಿತ ನಡೆಸಿದ್ದು, ಅವರ ಅಧಿಕಾರವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‍ಗೆ ಕೇಂದ್ರ ಸರಕಾರ ಪಂಚಾಯತ್ ಸಶಸ್ತ್ರೀಕರಣ ಪ್ರಶಸ್ತಿ ಮತ್ತು 50ಲಕ್ಷ ರೂ. ಪ್ರೋತ್ಸಾಹಧನ ನೀಡಿ ಪುರಸ್ಕರಿಸಿತ್ತು. 2010ರಿಂದ 2012ರವರಗೆ ಕರ್ನಾಟಕ ರಾಜ್ಯ ತೆಂಗುನಾರು ಅಭಿವೃಧ್ಧಿ ನಿಗಮದ ಅಧ್ಯಕ್ಷರಾಗಿ ನಷ್ಠದಲ್ಲಿದ್ದ ನಿಗಮವನ್ನು ಲಾಭದತ್ತ ಕೊಂಡ್ಯೊಯ್ದಿದ್ದರು.

ಎಂ.ಎ, ಬಿಇಡಿ, ಪದವೀದರಾಗಿರುವ ಅವರು, ಸಾಮಾಜಿಕವಾಗಿ ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಹಿತರಕ್ಷಣ ವೇದಿಕೆ ರಾಜ್ಯ ಕಾರ್ಯದರ್ಶಿಯಾಗಿ, ಜಿಲ್ಲಾ ಮಹಿಳಾ ಕದಳಿ ವೇದಿಕೆಯ ಜಿಲ್ಲಾಧ್ಯಕ್ಷರಾಗಿ, ಭಾರತೀಯ ಅಂಗನವಾಡಿ ಮತ್ತು ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡೂರು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಅವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣಕ್ಕೆ ಬಂಡಾಯ ಎದ್ದು, ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಬಿ.ಎಲ್. ಶಂಕರ್ ರವರೊಂದಿಗೆ ಚುನಾವಣೆ ಪ್ರಚಾರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News