ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದೆ: ಸಂಸದೆ ಶೋಭಾ ಕರಂದ್ಲಾಜೆ

Update: 2018-07-29 16:53 GMT

ದಾವಣಗೆರೆ,ಜು.29: ರಾಜ್ಯ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರ ದಕ್ಷಿಣ ಕರ್ನಾಟಕಕ್ಕೆ ಮಾತ್ರ ಸೀಮಿತಗೊಂಡು ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಲಿಂಗಾಯತ ಧರ್ಮವನ್ನು ಒಡೆಯಲು ಪ್ರಯತ್ನಿಸಿತ್ತು. ಈಗ ಜೆಡಿಎಸ್ ಜೊತೆ ಸೇರಿ ರಾಜ್ಯವನ್ನೇ ಒಡೆಯಲು ಯತ್ನಿಸುತ್ತಿದೆ. ಇಂಥಹ ದುಷ್ಟ ರಾಜಕಾರಣ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.

ಮತಬ್ಯಾಂಕ್ ರಾಜಕಾರಣಕ್ಕಾಗಿ ರಾಜ್ಯವನ್ನು ಬಲಿಕೊಡುವ ಯತ್ನವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಇಂಥಹ ಯೋಚನೆಯನ್ನು ಕೈ ಬಿಟ್ಟು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಕ್ಷಬೇಧ ಮರೆತು ಸಮ್ಮಿಶ್ರ ಸರ್ಕಾರ ಪ್ರಯತ್ನಿಸಬೇಕೆಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News