ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ
Update: 2018-07-29 22:28 IST
ಚೆನ್ನೈ, ಜು.29: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಕಾವೇರಿ ಆಸ್ಪತ್ರೆಯ ಹೊರಭಾಗದಲ್ಲಿ ಸಾವಿರಾರು ಜನರು ಜಮಾಯಿಸಿದ್ದಾರೆ.
“ಕರುಣಾನಿಧಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ವದಂತಿಗಳನ್ನು ನಂಬಬೇಡಿ” ಎಂದಿದ್ದಾರೆ. ಸಾವಿರಾರು ಮಂದಿ ಆಸ್ಪತ್ರೆಯ ಹೊರಭಾಗ ಜಮಾಯಿಸಿದ್ದು, ಕರುಣಾನಿಧಿಯವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.