×
Ad

ಬಂಟ್ವಾಳ: ಗಾಂಜಾ ಸಾಗಾಟ; ಆರೋಪಿ ಸೆರೆ

Update: 2018-07-29 22:35 IST

ಬಂಟ್ವಾಳ, ಜು. 29: ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯೋರ್ವನನ್ನು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಮೆಲ್ಕಾರ್ ನಲ್ಲಿ ರವಿವಾರ ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಕೊಡಗು ವಿರಾಜಪೇಟೆಯ ಚಾಮರಾಜನಗರ ನಿವಾಸಿ, ಕಲ್ಲಡ್ಕ ಸಮೀಪದ ಕೆಸಿ.ರೋಡುವಿನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ವಿರುವ ಅಲೀಮ್ ಆಲಿಯಾಸ್  ಆಲಿ(36) ಎಂದು ಗುರುತಿಸಲಾಗಿದೆ. ಮಾಣಿ ಕಡೆಯಿಂದ ಬಂಟ್ವಾಳ ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ವನ್ನು ಮಾರಾಟ ಮಾಡಲು ಸಾಗಿಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸ್ ನಿರೀಕ್ಷಕ ಸುನಿಲ್ ನಾಯಕ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಮೆಲ್ಕಾರ್ ನಲ್ಲಿ ಕಾರನ್ನು ಪರಿಶೀಲನೆಗೆಂದು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕ ಓಡಿ ಹೋಗಲು ಯತ್ನಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಜಿಲ್ಲಾ ಅಪರಾದ ಪತ್ತೆದಳದ ಪೊಲೀಸರು ಆತನನ್ನು ಬಂಧಿಸಿದ್ದು, ಕಾರಿನಲ್ಲಿ 2ಕೇಜಿ 100 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ಈತನಿಂದ ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಓಮಿನಿ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದು, ಒಟ್ಟು ಅಂದಾಜು ಮೌಲ್ಯ ರೂ 2,33,550/- ರೂ. ಆರೋಪಿ ಮತ್ತು ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಬಂಟ್ವಾಳ ನಗರ ಠಾಣೆಗೆ ಸೂಕ್ರ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ತಿಳಿಸಿದ್ದಾರೆ.

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ ಬಿ.ಆರ್ ರವಿಕಾಂತೇ ಗೌಡ ಐ.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸಜಿತ್ ರವರ ಸೂಚನೆಯಂತೆ ಡಿ.ಸಿ.ಐ.ಬಿ ಪೊಲೀಸ್ ನಿರೀಕ್ಷಕರಾದ ಸುನೀಲ್ ವೈ ನಾಯಕ್‌ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಗಳಾದ ಲಕ್ಷ್ಮಣ ಕೆ.ಜಿ, ಇಕ್ಬಾಲ್, ಉದಯ ರೈ, ಪ್ರವೀಣ್ ಎಂ, ತಾರಾನಾಥ್ ಎಸ್, ವಿಜಯ ಗೌಡ, ಶೋನ್‌ಶಾ ರವರು ಭಾಗವಹಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News