ಮಡಿಕೇರಿ: 80 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
Update: 2018-07-29 22:57 IST
ಮಡಿಕೇರಿ ಜು.29: ಮನೆ ಮಂದಿ ಪರ ಊರಿಗೆ ತೆರಳಿದ್ದ ಸಮಯದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಸುಮಾರು 80 ಸಾವಿರ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ವೀರಾಜಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಂಜಿತ್ ಕುಮಾರ್ ಎಂಬವರು ಕುಟುಂಬ ಸಹಿತ ಬೆಂಗಳೂರಿಗೆ ತೆರಳಿದ್ದು, ಮರಳಿ ಮನೆಗೆ ಬಂದು ನೋಡುವಾಗ ಮನೆಯ ಬೀಗ ಮುರಿದು ಕಳ್ಳರು ಒಳನುಗ್ಗಿರುವುದು ಗೋಚರಿಸಿದೆ. ಒಳ ಹೋಗಿ ನೋಡಿದಾಗ ಆಲ್ಮೇರಾದಲ್ಲಿರಿಸಿದ್ದ ಸುಮಾರು 80 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದ್ದು ತಿಳಿದುಬಂದಿದೆ.
ವೀರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.