ಬೆಂಗಳೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Update: 2018-07-30 13:00 GMT

ಬೆಂಗಳೂರು, ಜು.30: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ನೇಣಿಗೆ ಶರಣಾಗಿರುವ ದುರ್ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಂಗನಾಥಪುರದ ನಾಗರತ್ನ (38) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ನಾಗರತ್ನ ರವಿವಾರ ಮಧ್ಯಾಹ್ನ 4ರ ವೇಳೆ ಮನೆಯವರೆಲ್ಲ ಹೊರಗಡೆ ಹೋಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News