ನವಾಝ್ ಶರೀಫ್ ಜೈಲಿನಿಂದ ಆಸ್ಪತ್ರೆಗೆ ದಾಖಲು

Update: 2018-07-30 14:20 GMT

ಇಸ್ಲಾಮಾಬಾದ್, ಜು. 30: ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿರುವ ಮಾಜಿ ಪ್ರಧಾನಿ ನವಾಝ್ ಶರೀಫ್‌ರ ಆರೋಗ್ಯ ಸ್ಥಿತಿ ವಿಷಮಿಸಿದ ಹಿನ್ನೆಲೆಯಲ್ಲಿ ಅವರನ್ನು ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಪಿಐಎಂಎಸ್)ಗೆ ಸೇರಿಸಲಾಗಿದೆ.

  ಶರೀಫ್ ಹೃದಯ ರೋಗಿಯಾಗಿದ್ದಾರೆ. ಅವರ ಅನಿಯಮಿತ ಹೃದಯ ಚಟುವಟಿಕೆ ಹಾಗೂ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ವರ್ಗಾಯಿಸುವಂತೆ ವೈದ್ಯರು ಶಿಫಾರಸು ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News