ಹೂಡೆ: ಪ್ಲಾಸ್ಟಿಕ್ ಬಳಕೆ ನಿಷೇಧ ಆಂದೋಲನ
Update: 2018-07-30 20:10 IST
ಉಡುಪಿ, ಜು.30: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಜಾಗೃತಿ ಜಾಥಾ ವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ವಿಧ್ಯಾರ್ಥಿಗಳು ಸುತ್ತಮುತ್ತಲಿನ ಅಂಗಡಿಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ಮೂಡಿಸಿದರು. ಅಲ್ಲದೇ ವಿಧ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ ಪ್ಲಾಸ್ಟಿಕ್ ಬಳಕೆಯ ನಿಷೇಧದ ಕುರಿತು ಉಪನ್ಯಾಸ ನೀಡಿದರು.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಕಾಲೇಜಿನ ಉಪನ್ಯಾ ಸಕರು ಜಾಥದಲ್ಲಿ ಪಾಲ್ಗೊಂಡಿದ್ದರು.