ಕರಾಟೆ: ರಾಜ್ಯಮಟ್ಟಕ್ಕೆ ಆಯ್ಕೆ
Update: 2018-07-30 20:16 IST
ಬ್ರಹ್ಮಾವರ, ಜು.30: ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಾದ ಅಮೃತಾ ಮತ್ತು ಕಿಶನ್ ಚಿನ್ನದ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಮುಹಮ್ಮದ್ ಅಮಾನುಲ್ಲಾ ರಜತ ಪದಕವನ್ನು ಗಳಿಸಿದ್ದಾರೆ.