ಉಡುಪಿ: ಜಿಲ್ಲಾ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆ
ಉಡುಪಿ, ಜು.30: ಭಾರತ್ ಸ್ಕೌಟ್ -ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರವಿವಾರ ನಡೆಯಿತು.
ಜಿಲ್ಲಾ ಮುಖ್ಯ ಆಯುಕ್ತರಾದ ಶಾಂತಾ ವಿ.ಆಚಾರ್ಯ ದೀಪ ಬೆಳಗಿಸಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಜೊತೆ ಕಾರ್ಯದರ್ಶಿ ಡಾ.ಜಯರಾವ್ ಶೆಟ್ಟಿಗಾರ್ ಸ್ವಾಗತಿಸಿದರೆ, ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ವಂದಿಸಿದರು. ಗಣೇಶ್ ಜಾಲ್ಸೂರ್ ಕಾರ್ಯಕ್ರಮ ನಿರ್ವಹಿಸಿದರು.
ಜಿಲ್ಲಾ ಮುಖ್ಯ ಆಯುಕ್ತರಾದ ಶಾಂತಾ ವಿ.ಆಚಾರ್ಯ ದೀಪ ಬೆಳಗಿಸಿದರು. ಗಣೇಶ್ ಜಾಲ್ಸೂರ್ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಐ ಕೆ ಜಯಚಂದ್ರ, ಜಿಲ್ಲಾ ಸಂಸ್ಥೆಯ ಸಾವಿತ್ರಿ ಮನೋಹರ್, ಉಮೇಶ್ ಪೈ, ನಿಥಿನ್ ಅಮಿನ್, ಸುಮನ್ ಶೇಖರ್, ಮುಂತಾದವರು ಉಪಸ್ಥಿತರಿದ್ದರು.
ಸ್ಪರ್ಧೆಗೆ ಖ್ಯಾತ ಶಾಸ್ತ್ರೀಯ ಸಂಗೀತ ವಿದ್ವಾಂಸ ಮಧೂರು ಬಾಲಸುಬ್ರಮಣ್ಯಂ, ವಿಧೂಷಿ ವಿನುತ ಆಚಾರ್ಯ, ವಿಧೂಷಿ ಮುಕಾಂಬಿಕ, ನಿರ್ಣಾಯಕರಾಗಿ ಭಾಗವಹಿಸಿದ್ದರು.
ಫಲಿತಾಂಶ: ಸ್ಥಳೀಯ ಮಟ್ಟದಲ್ಲಿ ಆಯ್ಕೆಗೊಂಡ 21 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧಾ ವಿಜೇತರು: ಪ್ರಥಮ: ಮುಕುಂದಕೃಪಾ ಆಂಗ್ಲ ಮಾಧ್ಯಮ ಶಾಲೆ ಉಡುಪಿ, ದ್ವಿತೀಯ: ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆ ಮಣಿಪಾಲ್, ತೃತೀಯ: ಶ್ರೀ ಮದ್ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ.