ಕಟ್ಟಡದಿಂದ ಬಿದ್ದು ಮಧ್ಯಪ್ರದೇಶ ಕಾರ್ಮಿಕ ಮೃತ್ಯು
Update: 2018-07-30 22:46 IST
ಮಂಗಳೂರು, ಜು.30: ಬಿಜೈನ ಕಾಪಿಕಾಡು ಬಳಿಯ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಬುರೇಶಿ ನಿವಾಸಿ ಅನಿಲ್‌ಕುಮಾರ್ ಮಾಡಾವಿ (27) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ಅನಿಲ್‌ಕುಮಾರ್ ಹಲವು ವರ್ಷಗಳಿಂದ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದನು. ಒಂದನೇ ಮಹಡಿಯಿಂದ ಕೆಳಗೆ ಇಳಿಯುವಾಗ ಆಕಸ್ಮಿಕವಾಗಿ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.