×
Ad

ಹನೂರು: ಆಶ್ರಮ ಶಾಲೆಗಳ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Update: 2018-07-30 22:58 IST

ಹನೂರು,ಜು.30: ಗ್ರಾಮೀಣ ಮಟ್ಟದಲ್ಲಿ ಸರ್ಕಾರ ಗುಣಮಟ್ಟದ ಶಿಕ್ಷಣವನ್ನು ಕೊಡುವ ನಿಟ್ಟಿನಲ್ಲಿ ಸಾಕಷ್ಟು ಸೌಕರ್ಯಗಳನ್ನು ನೀಡುತ್ತಿದ್ದು, ಪೋಷಕರು ಸಹ ಈ ಸೌಕರ್ಯಗಳನ್ನು ಉಪಯೋಗಿಸಿಕೂಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮುಖಾಂತರ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿ ಎಂದು ಶಾಸಕ ಆರ್ ನರೇಂದ್ರ ರಾಜುಗೌಡ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಗಡಿಹಂಚಿನಲ್ಲಿರುವ ಹಿರಿಯಂಬಲ ಮತ್ತು ಅರ್ಧನಾರಿಪುರದ ಗಿರಿಜನ ಆಶ್ರಮ ಶಾಲೆಗಳಿಗೆ ತಲಾ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ನೂತನ ಕಟ್ಟಡಕ್ಕಾಗಿ ಶಿಲಾನ್ಯಾಸ ನೇರವೇರಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ಮಕ್ಕಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲಿ ಎಂಬ ಆಶಯದೊಂದಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಹಿರಿಹಂಬಲ ಮತ್ತು ಅರ್ಧನಾರಿಪುರ ಎರಡು ಗ್ರಾಮದಲ್ಲಿರುವ ಗಿರಿಜನ ಆಶ್ರಮ ಶಾಲೆಗಳಿಗೂ ಸಹ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭ ಜಿಪಂ ಅಧ್ಯಕ್ಷೆ ಶಿವಮ್ಮಕೃಷ್ಣ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಉಮಾವತಿ ಸದಸ್ಯೆ ಮರಗದಮಣಿ, ತಾಪಂ ಅಧ್ಯಕ್ಷ ರಾಜು, ತಾಪಂ ಸ್ಥಾಯಿಸಮಿತಿ ಅಧ್ಯಕ್ಷ ಜವಾದ್ ಅಹಮದ್, ಸದಸ್ಯೆ ಶಿವಮ್ಮ ಶಿವಪ್ಪ, ಜಿಪಂ ಹಿಂದುಳಿದ ವರ್ಗಗಳ ಅಧಿಕಾರಿ ಕೃಷ್ಣಪ್ಪ, ತಾಲೂಕು ಗಿರಿಜನ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಗಂಗಾದರ್, ಮುಖಂಡರಾದ ರವಿ, ಷಣ್ಮಗಮ್, ಪಿಜಿಪಾಳ್ಯ ಲೊಕೇಶ್ ಇನ್ನಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News