ಐಆರ್‌ಸಿಟಿಸಿ ಹಗರಣ: ಲಾಲು ಪ್ರಸಾದ್, ಪತ್ನಿ, ಪುತ್ರನಿಗೆ ಸಮನ್ಸ್

Update: 2018-07-30 17:37 GMT

 ಹೊಸದಿಲ್ಲಿ, ಜು. 30: ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್ (ಐಆರ್‌ಸಿಟಿಸಿ) ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಉಚ್ಚ ನ್ಯಾಯಾಲಯ ಸೋಮವಾರ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಹಾಗೂ ಇತರರ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ.

 ಎರಡು ಐಆರ್‌ಸಿಟಿಸಿ ಹೊಟೇಲ್‌ಗಳು ಹಾಗೂ ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡುವಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಗಸ್ಟ್ 31ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅರವಿಂದ ಕುಮಾರ್ ಅವರಿಗೆ ನಿರ್ದೇಶಿಸಿದ್ದಾರೆ. ಆರೋಪಿಗಳ ವಿರುದ್ಧ ಸಾಕಷ್ಟು ಪುರಾವೆಗಳು ಇವೆ ಎಂದು ಎಪ್ರಿಲ್ 16ರಂದು ಆರೋಪ ಪಟ್ಟಿ ದಾಖಲಿಸಿದ ಸಿಬಿಐ ಹೇಳಿತ್ತು. ಆರ್‌ಜೆಡಿ ವರಿಷ್ಠ ಹಾಗೂ ಅವರ ಕುಟುಂಬ ಸದಸ್ಯರು ಅಲ್ಲದೆ ಕೇಂದ್ರದ ಮಾಜಿ ಸಚಿವ ಪ್ರೇಮ್ ಚಂದ್ ಗುಪ್ತಾ, ಅವರ ಪತ್ನಿ ಸರಳಾ ಗುಪ್ತಾ, ಐಆರ್‌ಸಿಟಿಸಿಯ ಆಗಿನ ಆಡಳಿತ ನಿರ್ದೇಶಕ ಬಿ.ಕೆ. ಅಗರ್ವಾಲ್, ಐಆರ್‌ಸಿಟಿಸಿಯ ಆಗಿನ ನಿರ್ದೇಶಕ ರಾಕೇಶ್ ಸಕ್ಸೇನಾ ಮೊದಲಾದವರ ಹೆಸರನ್ನು ಆರೋಪ ಪಟ್ಟಿ ಒಳಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News